ಅ.11:ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದಿಂದ ಧಾರ್ಮಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು:ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಯುವ/ಮಹಿಳಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಮತ್ತು 2026-27ನೇ ಸಾಲಿನ ಸಮುದಾಯ ಬಾಂಧವರ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಅ.11 ರಂದು ಕೊಂಬೆಟ್ಟು ಮರಾಟಿ ಸಮಾಜ ಮಂದಿರದ ಸಭಾಂಗಣದಲ್ಲಿ ಜರಗಲಿದೆ.


ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಂಜುನಾಥ ಎನ್.ಎಸ್.ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ|ಡಾ.ಪುಟ್ಟಣ್ಣ ಕೆ, ಬೆಂಗಳೂರು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯವಾದಿ ಪ್ರವೀಣ್ ಕುಮಾರ್ ಮುಗುಳಿರವರು ಭಾಗವಹಿಸಲಿದ್ದಾರೆ.


ಪ್ರತಿಭಾ ಪುರಸ್ಕಾರ:
ಈ ಸಂದರ್ಭದಲ್ಲ 2025-26ನೇ ಸಾಲಿನ ಎಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ.75, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಮೇಲ್ಪಟ್ಟ ಮತ್ತು ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿಶೇಷ ಪ್ರತಿಭಾ ಪುರಸ್ಕೃತರಾಗಿರುವ ಸಮಾಜ ಬಾಂಧವರಿಗೆ ಪ್ರತಿಭಾ ಪುರಸ್ಕಾರ, ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಜೊತೆಗೆ ಹೆಚ್ಚಿನ ಮಾಹಿತಿಗಾಗಿ 9148038915, 9448783227, 9482035123, 9632381117 ನಂಬರಿಗೆ ಹೆಸರಿಗೆ ಸಂಪರ್ಕಿಸುವಂತೆ ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಂಜುನಾಥ ಎನ್‌. ಎಸ್‌., ಪ್ರಧಾನ ಕಾರ್ಯದರ್ಶಿ ರಾಮಚಂದ್ರ ನಾಯ್ಕ ಕೇಪುಳು, ಕೋಶಾಧಿಕಾರಿ ಶಿವಪ್ಪ ನಾಯ್ಕ ಎಸ್, ಪೂಜಾ ಸಮಿತಿ ಸಂಚಾಲಕ ಪೂವಪ್ಪ ನಾಯ್ಕ ಕುಂಞಕುಮೇರು, ಯುವ ವೇದಿಕೆ ಅಧ್ಯಕ್ಷ ಸಂದೀಪ್ ಆರ್ಯಾಪು, ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಕಿಶೋರಿ ದುಗ್ಗಪ್ಪ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here