ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

0

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026-27 ಟೇಕ್ವಾಂಡೋ ಸ್ಪರ್ಧೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ. ಇವರಿಗೆ ಶಿಹಾಬ್. ಟಿ ತರಬೇತಿ ನೀಡಿರುತ್ತಾರೆ.ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here