ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ!

0

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀಚರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ  “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12 ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು. ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ.ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here