ಶಶಿಕುಮಾರ್‌ ರೈ ಹುಟ್ಟೂರ ಅಭಿನಂದನಾ ಸಮಿತಿ – ಲೆಕ್ಕಾಚಾರ ಮಂಡನಾ ಸಭೆ

0

ಉಳಿಕೆ ಮೊತ್ತ ದೇವಸ್ಥಾನಗಳ ಅಭಿವೃದ್ಧಿಗೆ ದೇಣಿಗೆ

ಬೆಟ್ಟಂಪಾಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ಸಹಕಾರಿ ಧುರೀಣ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರೂ ಆಗಿರುವ ಶಶಿಕುಮಾರ್‌ ರೈ ಬಾಲ್ಯೊಟ್ಟುರವರ ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಸೆ. 20 ರಂದು ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರಿ ಸಂಘದ ಆವರಣದಲ್ಲಿ ನಡೆದ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಖರ್ಚು ವೆಚ್ಚಗಳ ಲೆಕ್ಕಾಚಾರ ಮಂಡನಾ ಸಭೆಯು ಇತ್ತೀಚೆಗೆ ಸಂಘದ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮಕ್ಕಾಗಿ ಊರಿನ ದಾನಿಗಳಿಂದ ದೇಣಿಗೆ ಸಂಗ್ರಹಿಸಲಾಗಿದ್ದು, ಖರ್ಚು ವೆಚ್ಚಗಳು ಕಳೆದು ಉಳಿಕೆ ಮೊತ್ತವನ್ನು ಸ್ಥಳೀಯ ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಕಾರ್ಯಕ್ಕೆ ನೀಡುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು. ಸಭೆಯಲ್ಲಿ ಅಭಿನಂದನಾ ಸಮಿತಿಯ ಅಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಕಾರ್ಯದರ್ಶಿ ಪ್ರಕಾಶ್‌ ರೈ ಬೈಲಾಡಿ, ಕೋಶಾಧಿಕಾರಿ ಜಗನ್ನಾಥ ರೈ ಕೊಮ್ಮಂಡ, ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ., ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here