ಮೋದಿ 25 ವರ್ಷಗಳ ಆಡಳಿತ ಸಂಭ್ರಮ: ಗುಂಡ್ಯದಲ್ಲಿ ಬೀದಿ ನಾಟಕಕ್ಕೆ ಚಾಲನೆ

0

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಯಶಸ್ವಿ ಆಡಳಿತ ಹಾಗೂ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡ ಒಂದು ತಿಂಗಳ ಸೇವಾ ಚಟುವಟಿಕೆ ಹಾಗೂ 2047 ವಿಕಸಿತ ಭಾರತ ಸಂಕಲ್ಪದ ಸೇವಾ ಪಾಕ್ಷಿಕದ ಅಂಗವಾಗಿ ಬೀದಿ ನಾಟಕದ ಮೂಲಕ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬೀದಿ ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ಅ.12ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಗುಂಡ್ಯದಲ್ಲಿ ನಡೆಯಿತು. ಮೊದಲ ಪ್ರದರ್ಶನವೂ ಅದೇ ದಿನ ನಡೆಯಿತು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಎಸ್. ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ, ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಪ್ರಸನ್ನ ಮಾರ್ತ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ರೈ ಮನವಳಿಕೆ, ವಿನಯ್ ಕಂದಡ್ಕ, ವಿಕಾಸ್ ಪುತ್ತೂರು, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಸಮಿತಿ ಪದಾಧಿಕಾರಿಗಳು, ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here