ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ

0

ಪುತ್ತೂರು: ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮನ್ವಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ  ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.

ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here