








ಪುತ್ತೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಬಾಲವನದಲ್ಲಿ ಅಕ್ಟೋಬರ್ 10ರಂದು ಜರುಗಿದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೆ. ಶಿವರಾಮ ಕಾರಂತರ 125ನೇ ಜನ್ಮದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ನಾಣ್ಯ ಸಂಗ್ರಾಹಕ ಅಬ್ದುಲ್ ಸಮದ್ ಬಾವಾ ಅವರ ನಾಣ್ಯ ಹಾಗೂ ಪ್ರಾಚ್ಯ ವಸ್ತು ಸಂಗ್ರಹವನ್ನು ಕುತೂಹಲದಿಂದ ವೀಕ್ಷಿಸಿ ಅಭಿನಂದಿಸಿದರು.












