ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ

0


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ಸಹಾಯಕ ಪ್ರಾಧ್ಯಾಪಕರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

ಪ್ರಮೋದ್ ಕುಮಾರ್.ಪಿ.ಎಮ್
ವಿವೇಕಾನಂದ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಾಜಿ ಕಾಲೇಜಿನ ಉಪನ್ಯಾಸಕ ಪ್ರಮೋದ್ ಕುಮಾರ್ ಪಿ.ಎಂ, ಡಾಕ್ಡರೇಟ್ ಪದವಿ ತಿಪ್ಪಟೂರಿನ ಕಲ್ಪತರು ಇಸ್ಟಿಟ್ಯೂಟ್ ಆಪ್ ಟೆಕ್ನಾಲಾಜಿ ಕಾಲೇಜಿನ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಆಂಡ್ ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥ ಡಾ. ರವಿಪ್ರಕಾಶ್ ಎಂ.ಎಲ್ ಇವರ ಮಾರ್ಗದರ್ಶನದಲ್ಲಿ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯ ವಿಟಿಯು ಗೆ ಸಲ್ಲಿಸಿದ “ARECA PLANT DISEASE IDENTIFICATION AND CLASSIFICATION USING DEEP LEARNING TECHNIQUES” (ಅರೆಕಾ ಪ್ಲಾಂಟ್ ಡಿಸೀಸ್ ಐಡೆಂಟಿಫಿಕೇಶನ್ ಆಂಡ್ ಕ್ಲಾಸಿಫಿಕೇಶನ್ ಯುಸಿಂಗ್ ಡೀಪ್ ಲರ್ನಿಂಗ್ ಟೆಕ್ನಿಕ್ಸ್) ಎಂಬ ಮಹಾ ಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ ಲಭಿಸಿದೆ.
ಇವರು ನಿವೃತ್ತ ಮುಖೋಪಾಧ್ಯಯ ಮೋನಪ್ಪ ಗೌಡ.ಪಿ ಮತ್ತು ದೇವಕಿ.ಪಿ ದಂಪತಿಗಳ ಪುತ್ರನಾಗಿರುವ ಡಾ.ಪ್ರಮೋದ್ ಕುಮಾರ್ ಪಿ.ಎಂ ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲ್ತಾಡಿ ಹಾಗೂ ಪ್ರೌಢ ಮತ್ತು ಪದವಿ ಶಿಕ್ಷಣವನ್ನು ಶ್ರೀ ರಾಮಕುಂಜೇಶ್ವರ ಪಿ.ಯು ಕಾಲೇಜು, ರಾಮಕುಂಜ ಇಲ್ಲಿ ಪೂರೈಸಿ, ನಂತರ ಮಂಗಳೂರಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಇ ಮುಗಿಸಿ, ಸ್ನಾತಕೋತ್ತರ ಪದವಿಯನ್ನು ಶಿವಮೊಗ್ಗದ ಜವಹಾರ್‌ಲಾಲ್ ನೆಹರು ನ್ಯಾಶನಲ್ ಕಾಲೇಜ್ ಆಪ್ ಇಂಜಿನಿಯರಿಂಗ್‌ನಲ್ಲಿ ಪೊರೈಸಿದ್ದಾರೆ. ಪ್ರಸ್ತುತ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿ ಕಾಲೇಜಿನಲ್ಲಿ 14 ವರ್ಷಗಳಿಂದ ಉಪನ್ಯಾಸರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಪತ್ನಿ ಹವ್ಯಶ್ರೀ ಪುರ ಇವರು ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಪತಿಕೋದ್ಯಮ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಕ್ಷಯ.ಡಿ.ಶೆಟ್ಟಿ
ಅಕ್ಷಯ.ಡಿ.ಶೆಟ್ಟಿ ಇವರು ಡಿಸೈನ್ ಎಂಡ್ ವ್ಯಾಲಿಡೇಶನ್ ಆಫ್ ಗ್ಯಾಲ್ವೇನಿಕ್ ಸ್ಕಿನ್ ರೆಸ್ಪೊನ್ಸ್ ಡಿವೈಸ್ ಫಾರ್ ಟ್ರೀಟ್‌ಮೆಂಟ್ ಆಫ್ ನ್ಯೂರೋಲಾಜಿಕಲ್ ಎಂಡ್ ಸೈಕಿಯಾಟ್ರಿಕ್ ಡಿಸಾರ್ಡರ್ಸ್ (Design and Validation of galvanic skin response (GSR) device for treatment of neurological and psychiatric  disorders) ಎನ್ನುವ ವಿಷಯದ ಬಗ್ಗೆ ಎಸ್.ಇ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರೊಫೆಸರ್ ಹಾಗೂ ಡೀನ್(ಆರ್&ಡಿ) ಆಗಿರುವ ಡಾ.ಉಷಾ ದೇಸಾಯಿ ಮತ್ತು ಸೆಂಟ್ರಲ್ ಯುನಿವರ್ಸಿಟಿ ಹರ್ಯಾಣದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಡಾ.ಆಕಾಶ್ ಸಕ್ಸೇನ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದಲ್ಲಿ 9 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಇವರ ಸಾಧನೆಗೆ ಆಡಳಿತ ಮಂಡಳಿ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್.ಎಸ್.ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here