ಉಪ್ಪಿನಂಗಡಿ ಎಸ್‌ಐಆರ್‌ ರದ್ಧತಿಗೆ ಆಗ್ರಹ: ಎಸ್‌ಡಿಪಿಐ ಪ್ರತಿಭಟನೆ

0

ಉಪ್ಪಿನಂಗಡಿ: ದೆಹಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗುತ್ತಿದೆ. ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಎಸ್‌ಐಆರ್‌ಯನ್ನು ರದ್ದುಪಡಿಸಬೇಕು ಮತ್ತು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಉಪ್ಪಿನಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು.

ಎಸ್‌ಡಿಪಿಐ ಬ್ಲಾಕ್ ಸಮಿತಿ ಸದಸ್ಯ ಝಕರಿಯ ಕೊಡಿಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸರಕಾರ ಪ್ರಯೋಜಿತ ಚುನಾವಣಾ ಆಯೋಗದ ಮತ ಕಳ್ಳತನವನ್ನು ಖಂಡಿಸಿದರು.
ಎಸ್‌ಡಿಪಿಐ ಉಪ್ಪಿನಂಗಡಿ- ಕಡಬ ಬ್ಲಾಕ್ ಸಮಿತಿ ಕಾರ್ಯದರ್ಶಿ ತುಫೈಲ್ ಆತೂರು ಮಾತನಾಡಿ, ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರಲ್ಲದೆ, ದೇಶದಲ್ಲಿ ಚುನಾವಣೆಗಳ ಪಾರದರ್ಶಕತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಹೇಳಿದರು.

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಯುವ ಸಮುದಾಯ, ವಿಶೇಷವಾಗಿ ಝೆನ್‌ಜಿ ಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವವರನ್ನು ಬಂಧಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರಲ್ಲದೆ, ಯುವಜನರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ಮುಂದುವರಿದರೆ ಜನಾಕ್ರೋಶ ಮತ್ತಷ್ಟು ಹೆಚ್ಚಾಗಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಉಪ್ಪಿನಂಗಡಿ- ಕಡಬ ಬ್ಲಾಕ್ ಸಮಿತಿಯ ಉಪಾಧ್ಯಕ್ಷ ಮುಸ್ತಫಾ ಲತೀಫಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಶೀದ್ ಮಠ, ಉಪ್ಪಿನಂಗಡಿ ಗ್ರಾಮ ಸಮಿತಿ ಅಧ್ಯಕ್ಷ ಮುಸ್ತಾಫಾ ನಿರ್ಮಾ, ನೆಕ್ಕಿಲಾಡಿ ಗ್ರಾಮ ಸಮಿತಿ ಅಧ್ಯಕ್ಷ ಯೂಸುಫ್ ಬೇರಿಕೆ ಹಾಗೂ ಕಾರ್ಯದರ್ಶಿ ಅನ್ವರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here