







ಪುತ್ತೂರು: ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ಗೆ ರೂ.8000 ವಿಶೇಷರಿಯಾಯಿತಿ ನೀಡಲಾಗುವುದು. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ. ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಮುನ್ನಡೆಯುತ್ತಿದೆ. ಗುಣಮಟ್ಟ ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆಸಿದ್ದಪಡಿಸಿದೆ. ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.












