ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಸಾನಿಧ್ಯ ಎಸ್. ರಾವ್ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ – SGFIಗೆ ಆಯ್ಕೆ

0

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರ ವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿಯನ್ನು ನೀಡಿ ಪ್ರಥಮ ಸ್ಥಾನ ಪಡೆದು ಶಾಲಾ ಕೀರ್ತಿಪತಾಕೆಯನ್ನು ರಾಷ್ಟ್ರಮಟ್ಟದಲ್ಲಿ ಹಾರಿಸಿದ್ದಾರೆ. ಈ ಗೆಲುವಿನೊಂದಿಗೆ ಈಕೆ ಮುಂದಿನ ಹಂತವಾದ SGFI (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಈಕೆ, ತಮ್ಮ ಅತ್ಯುತ್ತಮ ಪ್ರದರ್ಶನ, ನಿರಂತರ ಪರಿಶ್ರಮ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಸಾಧನೆ ಮಾಡಿದ್ದಾರೆ. ಈಕೆಯ ಈ ಗೆಲುವಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವರ್ಗ, ಶಿಕ್ಷಕೇತರ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here