







ಪುತ್ತೂರು: ಮಾತೃಸಂಸ್ಥೆ ಅಕ್ಷಯ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ವೃತ್ತಿಪರ ಶಿಕ್ಷಣ ಅಕ್ಷಯ ಪದವಿ ಕಾಲೇಜು, ಅಕ್ಷಯ ಪದವಿ ಪೂರ್ವ ಕಾಲೇಜು, ಅಕ್ಷಯ ಕೆರಿಯರ್ ಅಕಾಡೆಮಿ, ಅಕ್ಷಯ ಕೆರಿಯರ್ ಡೆಸ್ಟಿನಿ ಹೆಸರಿನಲ್ಲಿ ಕಳೆದ ಐದಾರು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಇದೀಗ ಲಿಪ್ಟ್ ಸಮೇತ ಸಕಲ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿದ್ದು ಇದರ ನೂತನ ಸಭಾಂಗಣ, ಲಿಫ್ಟ್, ವಿವಿಧ ಪ್ರಯೋಗಾಲಯ, ಏವಿಯೇಶನ್ ಟ್ರೈನಿಂಗ್ ಸ್ಟುಡಿಯೋ, ವಿದ್ಯಾರ್ಥಿನಿಲಯಗಳ ಉದ್ಘಾಟನೆ ಹಾಗೂ ವರ್ಷಂಪ್ರತಿ ಆಚರಿಸುವ ಶಾರದೋತ್ಸವ, ಕುಣಿತ ಭಜನೆ, ಆಯುಧಪೂಜೆ ಕಾರ್ಯಕ್ರಮ ಅ.15 ರಂದು ಸಂಭ್ರಮದೊಂದಿಗೆ ಆಚರಣೆಗೊಳ್ಳಲಿದೆ.


ಕಾರ್ಯಕ್ರಮದಲ್ಲಿ ಬೆಳಿಗ್ಗೆ ಕುಣಿತ ಭಜನೆ, ವಾಹನಗಳಿಗೆ ಆಯುಧಪೂಜೆ ಹಾಗೂ ಶಾರದೋತ್ಸವ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಮಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲುರವರ ತಂದೆ ನಾರಾಯಣ ಸಾಲ್ಯಾನ್ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ.



ಮಂತ್ರಿ/ಸಚಿವರ/ಪ್ರಮುಖರ ದಂಡು:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಸಂಸದರಾದ ಕ್ಯಾ|ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಡಿಕೇರಿ ಶಾಸಕ ಮಂಥರ್ ಗೌಡ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ್ ರೈ, ಮಾಜಿ ಪುತ್ತೂರು ಶಾಸಕ ಸಂಜೀವ ಮಠಂದೂರ್, ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪದ್ಮರಾಜ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಪುತ್ತೂರು ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ವಂ|ಡಾ|ಜೆ.ಬಿ ಸಲ್ದಾನ್ಹಾ, ಸಂಪ್ಯ ಮೆಡ್ಲ್ಯಾಂಡ್ ಆಸ್ಪತ್ರೆ ಮಾಲಕ ಡಾ|ಅಶ್ರಫ್ ಕಮ್ಮಾಡಿ, ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಯು.ಪಿ ಶಿವಾನಂದ, ಭಾರತ್ ಬ್ಯಾಂಕ್(ಮುಂಬೈ) ಲಿ. ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ರೋಟರಿ 3181 ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ಕೊಂಬೆಟ್ಟು ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಮೂರ್ತೆದಾರರ ಮಹಾಮಂಡಳಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಪುತ್ತಿಲ ಪರಿವಾರ ಟ್ರಸ್ಟ್ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು, ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ವಿಜಯ ಸಾಮ್ರಾಟ್ ಪ್ರತಿಷ್ಠಾನ ಅಧ್ಯಕ್ಷ ಸಹಜ್ ರೈ ಬಳೆಜ್ಜ, ಪುತ್ತೂರು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಸುಂದರ ಗೌಡರವರು ಭಾಗವಹಿಸಲಿರುವರು ಎಂದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್, ಅಕ್ಷಯ ಪದವಿ ಕಾಲೇಜು ಪ್ರಾಂಶುಪಾಲ ಸಂಪತ್ ಪಿ.ಪಕ್ಕಳ, ಆಡಳಿತಾಧಿಕಾರಿ ಡಾ.ಅರ್ಪಿತ್ ಟಿ.ಎ, ಅಕ್ಷಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅಭಿಲಾಷ್ ಕ್ಷತ್ರೀಯ, ಶಾರದಾಪೂಜಾ ಕಾರ್ಯಕ್ರಮದ ಸಂಯೋಜಕ ರಾಕೇಶ್ ಕೆ, ಅಕ್ಷಯ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೂರ್ಯ, ಅಕ್ಷಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಹುವೈಸ್ ಮಿಸ್ಟ, ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿವೃಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೃದಯಪೂರ್ವಕ ಸ್ವಾಗತ..
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣವನ್ನು ಒದಗಿಸಿ, ಶೇ.100ರಷ್ಟು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮಹತ್ತರ ಉದ್ದೇಶದೊಂದಿಗೆ, ಕೊಡಗು, ಪುತ್ತೂರು, ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಭ್ಯವಿರದ ವಿಶಿಷ್ಟ ವೃತ್ತಿಪರ ಕೋರ್ಸ್ಗಳನ್ನು ಪರಿಚಯಿಸಿ, ಕಳೆದ ಆರು ವರ್ಷಗಳಿಂದ ಸಂಪ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳು, ಇಂದು ತನ್ನ ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ತಲುಪಿದೆ.
ಈ ಶುಭ ಸಂದರ್ಭದಲ್ಲಿ 2,೦೦೦ ಜನರ ಆಸನ ಸಾಮರ್ಥ್ಯವುಳ್ಳ ನೂತನ ಸಭಾಂಗಣ, ಅತ್ಯಾಧುನಿಕ ಏವಿಯೇಷನ್ ಸ್ಟುಡಿಯೋ ಹಾಗೂ ಸುಸಜ್ಜಿತ ಪ್ರಯೋಗಾಲಯಗಳ ಉದ್ಘಾಟನಾ ಕಾರ್ಯಕ್ರಮವನ್ನು ನವರಾತ್ರಿಯ ಶುಭ ಸಂಭ್ರಮದಲ್ಲಿ ಶಾರದಾ ಪೂಜೆಯೊಂದಿಗೆ ಆಯೋಜಿಸಲಾಗಿದೆ. ಈ ಶುಭ ಸಮಾರಂಭಕ್ಕೆ ತಮ್ಮೆಲ್ಲರನ್ನೂ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪರವಾಗಿ ಹೃದಯಪೂರ್ವಕವಾಗಿ ಸ್ವಾಗತಿಸುತ್ತಿದ್ದೇನೆ.
-ಜಯಂತ್ ನಡುಬೈಲು, ಅಧ್ಯಕ್ಷರು
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳು










