







ಅರ್ಜಿ ಸಲ್ಲಿಸಿದ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ


ಪುತ್ತೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ( AICC ) ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ( KPCC ) ವತಿಯಿಂದ ಸಂಘಟನ್ – ಸೃಜನ್ ಅಭಿಯಾನ್ ಕಾರ್ಯಕ್ರಮ ದಡಿಯಲ್ಲಿ ಪಕ್ಷವನ್ನು ತಳ ಮಟ್ಟದಿಂದ ಸಂಘಟಿಸಲು ಕೆಪಿಸಿಸಿ ಕಾರ್ಯದರ್ಶಿ ಮತ್ತು ಕೆಪಿಸಿಸಿ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗದ ರಾಜ್ಯ ನಿಕಟ ಪೂರ್ವ ಕಾರ್ಯದರ್ಶಿ, ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ.ಎಂ. ಮುಸ್ತಫ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಿದರು.
ನೇಮಕಾತಿ ಗಾಗಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ರವರನ್ನೊಳಗೊಂಡ 7 ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಸಂದರ್ಶನ ದ ಮೂಲಕ ಆಯ್ಕೆ ನಡೆಸಲಾಗುತ್ತದೆ.ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.













