ಅ.17: ಕುಂಬ್ರದಲ್ಲಿ 4ನೇ ವರ್ಷದ ಮಾರ್ನೆಮಿದ ಗೌಜಿ – ಸ್ಥಳೀಯ ಮಾರ್ನೆಮಿ ವೇಷಧಾರಿಗಳ ಗುಂಪು ಸ್ಪರ್ಧೆ

0

ಪುತ್ತೂರು: ನವರಾತ್ರಿ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ನಡೆಯುವ ಮಾರ್ನೆಮಿಯ ಸ್ಥಳೀಯ ವೇಷಧಾರಿಗಳಿಗೆ ಗೌರವ ಕೊಡುವ ನಿಟ್ಟಿನಲ್ಲಿ ಬಾಂತಲಪ್ಪು ಜನಸೇವಾ ಸಮಿತಿ ಕುಂಬ್ರ ಆಯೋಜನೆ ಮಾಡಿದ ಕುಂಬ್ರದ ಮಾರ್ನೆಮಿದ ಗೌಜಿ ಯಶಸ್ವಿ 4ನೇ ವರ್ಷಕ್ಕೆ ಕಾಲಿಟ್ಟಿದ್ದು ಅ.17 ರಂದು 4ನೇ ವರ್ಷದ ಮಾರ್ನೆಮಿದ ಗೌಜಿ ಆಯ್ದ ಸ್ಥಳೀಯ ಮಾರ್ನೆಮಿ ವೇಷಧಾರಿಗಳ ಗುಂಪು ಸ್ಪರ್ಧೆ ನಡೆಯಲಿದೆ. ಬಾಂತಲಪ್ಪು ಜನಸೇವಾ ಸಮಿತಿ ಕುಂಬ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇವರ ಆಶ್ರಯದಲ್ಲಿ ಕುಂಬ್ರ ಜಂಕ್ಷನ್‌ನಲ್ಲಿರುವ ಕುಂಬ್ರ ಚೆನ್ನಪ್ಪ ರೈ ಕುಂಬ್ರ ಜತ್ತಪ್ಪ ರೈ ಸ್ಮಾರಕ ಅಶ್ವತ್ಥ ಕಟ್ಟೆಯ ಬಳಿ ಕಾರ್ಯಕ್ರಮ ನಡೆಯಲಿದ್ದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಸಭಾಧ್ಯಕ್ಷತೆ ವಹಿಸಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈಯವರಿಗೆ ಈ ವಿಶೇಷ ಸನ್ಮಾನ ನಡೆಯಲಿದ್ದು ಒಳಮೊಗ್ರು ಕುಕ್ಕುಮುಗೇರು ಶ್ರೀ ಉಳ್ಳಾಕ್ಲು ದೈವಸ್ಥಾನದ ಮೊಕ್ತೇಸರ ಅರಿಯಡ್ಕ ಚಿಕ್ಕಪ್ಪ ನಾೖಕ್‌ ರವರು ಸನ್ಮಾನ ನೆರವೇರಿಸಲಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‌ರವರು ಗಂತ್‌ದ ಉದ್ಘಾಟನೆ ಮಾಡಲಿದ್ದು ಮಾಜಿ ಸಚಿವ ಎಸ್.ಅಂಗಾರ ಅಂಗಣ ಉದ್ಘಾಟನೆ ಮಾಡಲಿದ್ದಾರೆ. ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು ಆಶಯ ಮಾತುಗಳನ್ನಾಡಲಿದ್ದಾರೆ.


ವಿಶೇಷ ಅತಿಥಿಗಳಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ರಾಮ ಪಾಟಾಜೆ ಬೆಳ್ಳಾರೆ, ಆಕರ್ಷಣ್ ಗ್ರೂಪ್ಸ್ ಮಾಲಕ ಅಹಮ್ಮದ್ ಸಾದಿಕ್ ಕುಂಬ್ರ, ಅಮ್ಮ ವುಡ್ ವರ್ಕ್ಸ್‌ನ ಉದಯ ಭಟ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಅಳ್ವ, ಜಿಲ್ಲಾ ಸೇವಾ ದಳದ ಜೋಕಿಂ ಡಿ’ಸೋಜಾ, ಕೃಷಿಕ ಸಮಾಜ ಕಡಬ ತಾಲೂಕಿನ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಅಕ್ಷಯ ಸಮೂಹ ಸಂಸ್ಥೆಗಳ ಸಂಚಾಲಕ ಜಯಂತ ನಡುಬೈಲ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಭಾಸ್ಕರ ಕೋಡಿಂಬಾಳ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಉದ್ಯಮಿ ಮೋಹನದಾಸ ರೈ ಕುಂಬ್ರ, ಎನ್‌ಎಸ್‌ಯುಐ ರಾಜ್ಯ ಘಟಕದ ಉಪಾಧ್ಯಕ್ಷ ಫಾರೂಕ್ ಬಾಯಬೆ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಜಯರಾಮ್, ಕುಂಬ್ರ ವರ್ತಕರ ಸಂಘದ ಅಧ್ಯಕ್ಷ ಪಿ.ಕೆ ಮಹಮ್ಮದ್ ಕೂಡುರಸ್ತೆ, ಕಟ್ಟಡ ಕಾರ್ಮಿಕರ ಸಂಘದ ವಲಯ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ ಸಹಿತ ಹಲವು ಮಂದಿ ಭಾಗವಹಿಸಲಿದ್ದಾರೆ. ಗ್ರಾಮಸ್ಥರು, ಮಾರ್ನೆಮಿಯ ಪಿಲಿ ನಲಿಕೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಾಂತಲಪ್ಪ ಜನಸೇವಾ ಸಮಿತಿಯ ಅಧ್ಯಕ್ಷ ಎ.ರಕ್ಷಿತ್ ರೈ ಮುಗೇರು, ಗೌರವ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟರ್ ಪೂರ್ಣಿಮಾ, ಬಾಂತಲಪ್ಪ ಜನಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಶೋಕ್ ಪೂಜಾರಿ ಬೊಳ್ಳಾಡಿ, ಕೋಶಾಧಿಕಾರಿ ಅಶ್ರಫ್ ಉಜಿರೋಡಿ, ಉಪಾಧ್ಯಕ್ಷ ವಿನೋದ್ ಶೆಟ್ಟಿ ಮುಡಾಲ, ಸಂಚಾಲಕ ಶಶಿಕಿರಣ್ ರೈ ನೂಜಿಬೈಲು, ಸಹಸಂಚಾಲಕ ಸಂತೋಷ್ ಭಂಡಾರಿ ಚಿಲ್ಮೆತ್ತಾರು ಹಾಗೂ ಪದಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬಹುಮಾನಗಳು
ಆಯ್ದ ಸ್ಥಳೀಯ ಮಾರ್ನೆಮಿ ವೇಷಧಾರಿಗಳ ಗುಂಪು ಸ್ಪರ್ಧೆಯು ಸಂಜೆ 7 ರಿಂದ ಆರಂಭಗೊಳ್ಳಲಿದ್ದು ಇದರಲ್ಲಿ ವಿನ್ನರ್ 2 ಮುಡಿ ಅಕ್ಕಿ, ರನ್ನರ್1 ಮತ್ತು ರನ್ನರ್ 2 ತಲಾ 1 ಮುಡಿ ಅಕ್ಕಿ ಹಾಗೂ ಶಾಶ್ವತ ಫಲಕ ಇರಲಿದೆ.ವಿಶೇಷವಾಗಿ ಮಾರ್ನೆಮಿಯ ವಿವಿಧ ಗುಂಪು ಹಾಗೂ ವೈಯುಕ್ತಿಕ ವೇಷಗಳಿಗೂ ಪ್ರತ್ಯೇಕ ಸ್ಪರ್ಧೆ ನಡೆಸಿ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ. ಇದಲ್ಲದೆ ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರೋತ್ಸಾಹಕ ನಗದು ಬಹುಮಾನ ಇರಲಿದೆ.

ವಿಶೇಷ ಆಕರ್ಷಣೆ
ಸಂಸ್ಕೃತಿ ಉಳಿಸುವಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನ ಎಂಬ ನಿಟ್ಟಿನಲ್ಲಿ ನಡೆಯುವ ಈ ಮಾರ್ನೆಮಿಯ ಗೌಜಿಯಲ್ಲಿ ಗ್ರಾಮೀಣ ಭಾಗದ ಮಾರ್ನೆಮಿ ವೇಷಧಾರಿಗಳಿಗೆ ಮಾತ್ರ ಅವಕಾಶ ಇರಲಿದೆ. ವಿಶೇಷವಾಗಿ ಜುಗಲ್ ಬಂದಿ ನಿರೂಪಣೆ, ಆಕರ್ಷಕ ತೀರ್ಪುಗಾರಿಕೆಯೊಂದಿಗೆ ಸ್ಪರ್ಧೆ ನಡೆಯಲಿದೆ.

LEAVE A REPLY

Please enter your comment!
Please enter your name here