​ ಸಂಟ್ಯಾರ್ :ಲಾರಿ- ಕಾರು ಭೀಕರ ಮುಖಾಮುಖಿ: ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿದ್ದ ಲಾರಿ- ಸಂಚಾರಕ್ಕೆ ಅಡಚಣೆ

0

​ಪುತ್ತೂರು : ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ಅತಿವೇಗ ಮತ್ತು ಓವರ್‌ಟೇಕ್ ಭರದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
​ಡಿಕ್ಕಿಯ ತೀವ್ರತೆಗೆ ಲಾರಿಯು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.


​ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪೂರ್ಣ ರಸ್ತೆ ತಡೆ ಉಂಟಾಗಿದ್ದು (ಬ್ಲಾಕ್), ವಾಹನಗಳು ಸಾಲುಗಟ್ಟಿ ನಿಂತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು.

LEAVE A REPLY

Please enter your comment!
Please enter your name here