ಪುತ್ತೂರು ತಾ|| ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆ

0

ಪುತ್ತೂರು : ತಾಲ್ಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಅ. 13 ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿತು. ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘದ ಆಶ್ರಯದಲ್ಲಿ ಜರಗಿದ ಬಂಟೆರೆ ಸೇರಿಗೆ ಕಾರ್ಯಕ್ರಮದ ಜಮಾ- ಖರ್ಚ ವೆಚ್ಚ ಮಂಡನೆ ನಡೆಯಿತು. ಜೊತೆಗೆ ಎರಡನೇ ವರ್ಷದ ಬಂಟೆರೆ ಜಾಲ್ ಡ್ ಪಿಲಿ ಪಜ್ಜೆ ಕಾರ್ಯಕ್ರಮ ನಡೆಸುವ ಬಗ್ಗೆ ಸಮಾಲೋಚನೆ ಮಾಡಲಾಯಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲ್ಲೂಕು ಸಮಿತಿ ಸಂಚಾಲಕರಾದ ಸಹಕಾರರತ್ನ ದಂಬೆಕ್ಕಾನ ಸದಾಶಿವ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಸ್ವಾಗತಿಸಿ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ ವಂದಿಸಿದರು. ಸಭೆಯಲ್ಲಿ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here