







ಪುತ್ತೂರು : ಅನಾರೋಗ್ಯದಿಂದ ಗುಣಮುಖರಾಗಿ ಅ. 15 ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವತಿಯಿಂದ ನಡೆಯುವ ಸಮಾಜಮುಖಿ ಸೇವಾ ಕಾರ್ಯಕ್ರಮದ ಉದ್ಘಾಟನೆ, ಅಶಕ್ತರಿಗೆ ನೆರವು ಮತ್ತು ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಹಸ್ತಾಂತರ ಕಾರ್ಯಕ್ರಮಕ್ಕೆ ಆಗಮಿಸಿದ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ರವರನ್ನು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ “ಸಹಕಾರ ರತ್ನ” ಕೆ.ಸೀತಾರಾಮ ರೈ ಸವಣೂರು ರವರು ಸ್ವಾಗತಿಸಿ, ಗೌರವಿಸಿದರು.


ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಾಕೆ ಮಾಧವ ಗೌಡ ರವರು ಉಪಸ್ಥಿತರಿದ್ದರು.













