







ಪುತ್ತೂರು: ಪುರಾತನ ಕಾರಣಿಕ ಕ್ಷೇತ್ರ ಇಲ್ಲಿನ ರೈಲು ನಿಲ್ದಾಣದ ಬಳಿಯಿರುವ ಲಕ್ಷ್ಮೀದೇವಿ ಬೆಟ್ಟದ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿರುವ ನವರಾತ್ರಿ ಉತ್ಸವದ 8ನೇ ದಿನದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಅ.18ರಂದು ಸಾಮೂಹಿಕ ಚಂಡಿಕಾ ಯಾಗ ನಡೆಯಲಿದೆ.


ವೇ.ಮೂ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿ ಹೋಮ ನಡೆದ ಬಳಿಕ ಚಂಡಿಕಾ ಯಾಗ ಪ್ರಾರಂಭಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಚಂದ್ರಶೇಖರ ಮೂಡಾಯೂರು ಬಳಗದವರಿಂದ ಸ್ಯಾಕ್ಸೋಫೋನ್ ವಾದನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಸುಬ್ರಹ್ಮಣ್ಯ ಕಾರಂತ ಉಡುಪಿ ಇವರಿಂದ ದೇವಿ ಪಾರಾಯಣ, ಮಧ್ಯಾಹ್ನ ಚಂಡಿಕಾ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.



ಅಪರಾಹ್ನ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಮತ್ತು ಕಲ್ಚರ್ ಇದರ ವಿದುಷಿ ನಯನಾ ರೈ ಮತ್ತು ವಿದುಷಿ ಸ್ವಸ್ತಿಕ ಆರ್ ಶೆಟ್ಟಿ ಇವರ ವಿದ್ಯಾರ್ಥಿಗಳಿಂದ ಭರತನಾಟ್ಯ, ಸಂಜೆ ಬನ್ನೂರು ಸ್ಪೂರ್ತಿ ಯುವಕ, ಯುವತಿ ಮಂಡಲದವರಿಂದ ಭಜನೆ, ರಾತ್ರಿ ಮಹಾಪೂಜೆ ನಡೆಯಲಿದೆ.
ಅ.19 ಆಯುಧ ಪೂಜೆ, 20 ತುಲಾಭಾರ ಸೇವೆ
ನವರಾತ್ರಿ ಉತ್ಸವದ 9ನೇ ದಿನದ ಕಾರ್ಯಕ್ರಮದಲ್ಲಿ ಅ.19ರಂದು ಸಂಜೆ ಆಯುಧ ಪೂಜೆ, ಕೊನೆಯ ದಿನವಾದ ಅ.20ರಂದು ಮಧ್ಯಾಹ್ನ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ನವರಾತ್ರಿ ಉತ್ಸವವು ಸಂಪನ್ನಗೊಳ್ಳಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ತಿಳಿಸಿದ್ದಾರೆ.










