







ಪುತ್ತೂರು: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿ ಶ್ರೇಯಸ್ ಸಿ ಭಂಡಾರಿ ಅವರು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.


ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ಪ್ರತಿಷ್ಠಿತ ಇನ್ಸ್ಪೈರ್-ಮಾನಕ್ (INSPIRE-MANAK) ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಶ್ರೇಯಸ್ ಪ್ರಶಸ್ತಿ ಪಡೆದಿದ್ದಾರೆ.ದೆಹಲಿಯಲ್ಲಿ ನಡೆದ ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಸಾವಿರಾರು ವಿದ್ಯಾರ್ಥಿಗಳ ನವೀನ ವಿಜ್ಞಾನ ಮಾದರಿಗಳು ಪ್ರದರ್ಶನಗೊಂಡಿದ್ದವು. ಈ ಪೈಕಿ ಶ್ರೇಯಸ್ ಭಂಡಾರಿ ಪ್ರಸ್ತುತಪಡಿಸಿದ ನವೀನ ಮಾದರಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಪ್ರಶಸ್ತಿಗೆ ಭಾಜನವಾಗಿದೆ. ಈ ಸಾಧನೆಯ ಮೂಲಕ ಶ್ರೇಯಸ್ ಅವರು ಮುಂದೆ ಜಪಾನ್ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.













