ಕೌಡಿಚ್ಚಾರು – ಮಾಯಿಲಕೊಚ್ಚಿ ರಸ್ತೆ: ಚರಂಡಿ ವ್ಯವಸ್ಥೆ ಇಲ್ಲದೆ ಅಂಗಡಿಗಳಿಗೆ ಮಳೆ ನೀರು ನುಗ್ಗಿ ಹಾನಿ

0

ಅರಿಯಡ್ಕ:ಅರಿಯಡ್ಕ ಗ್ರಾ.ಪಂ ವ್ಯಾಪ್ತಿಯ ಮಾಯಿಲಕೊಚ್ಚಿ ಹೋಗುವ ರಸ್ತೆ ಬದಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಬದಿಯಲ್ಲಿರುವ ಅಂಗಡಿ, ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕಳೆದ ವರ್ಷವೂ ಇದೇ ರೀತಿ ಅಪಾರ ಹಾನಿ ಸಂಭವಿಸಿತ್ತು. ಈ ಬಾರಿಯೂ ಮಳೆ ನೀರು ನುಗ್ಗಿ ನಷ್ಟ ಉಂಟಾಗಿದೆ. ಮಾರ್ಗ ಬದಿಯಲ್ಲಿರುವ ಪ್ರಶಾಂತ್ ಬಾರ್ ಸೇರಿದಂತೆ ಇತರೆ ಅಂಗಡಿಗಳು ಮತ್ತು ಮನೆಗಳಿಗೂ ಮಳೆ ನೀರು ನುಗ್ಗಿ ಹಾನಿಯಾಗಿದೆ ಎಂದು ಅಂಗಡಿ ಮಾಲೀಕರಾದ ಇಸ್ಮಾಯಿಲ್ ಹಾಜಿ ಅವರು ತಿಳಿಸಿದ್ದಾರೆ.

ಈ ರಸ್ತೆಗೆ ಸೂಕ್ತ ಚರಂಡಿ ವ್ಯವಸ್ಥೆ ಮಾಡಿಕೊಡಬೇಕಾಗಿ ಅರಿಯಡ್ಕ ಗ್ರಾಮ ಪಂಚಾಯತ್‌ಗೆ ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here