







ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ೯೨ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ದಸರಾ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಅ17ರಂದು ಸಂಜೆ ನಡೆಯಿತು.
ಹನುಮಗಿರಿ ಧರ್ಮಶ್ರೀ ಪ್ರತಿಷ್ಠಾನದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ್ತ ಮೂಡೆತ್ತಾಯ ದೀಪ ಬೆಳಗಿಸಿ ಮಾತನಾಡಿದರು.


ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು-ಮೈಸೂರು ವಿಭಾಗದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ತಿಂಗಳಾಡಿ ಶ್ರೀ ದೇವತಾ ಭಜನಾ ಮಂದಿರದ ಅಧ್ಯಕ್ಷ ಮಿತ್ರಂಪಾಡಿ ಜಯರಾಮ ರೈ, ವಾಸ್ತು ಇಂಜಿನಿಯರ್ ಪಿ.ಜಿ. ಜಗನ್ನಿವಾಸ ರಾವ್, ತಿಂಗಳಾಡಿ ಶ್ರೀ ದೇವತಾ ಭಜನಾ ಮಂದಿರದ ಕೋಶಾಧಿಕಾರಿ ಕೃಷ್ಣ ಭಟ್, ನಿವೃತ್ತ ಸೈನಿಕರಾದ ನಂದಕುಮಾರ್, ಸುದ್ದಿ ಮೀಡಿಯಾ ಲೈವ್ ವಿಭಾಗದ ಮುಖ್ಯಸ್ಥ ಉಮೇಶ್ ಮಿತ್ತಡ್ಕ, ಮಂದಿರದ ಪ್ರಧಾನ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಪದ್ಮನಾಭ ಹಂದ್ರಟ್ಟ ಉಪಸ್ಥಿತರಿದ್ದರು. ನವೀನ್ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.



ಬಳಿಕ ರಂಗಯ್ಯ ಬಳ್ಳಾಲ್ ಕೆದಂಬಾಡಿಬೀಡು ಮತ್ತು ತಂಡದವರಿಂದ ಭಕ್ತಿ-ಭಾವ-ಗಾನ ಸಂಭ್ರಮ ನಡೆಯಿತು.










