ರಾಮಕುಂಜ ನೇಲಡ್ಕದಲ್ಲಿ ಸೇತುವೆ ಬೇಡಿಕೆ

0

ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ಜಿ.ಭೇಟಿ -ಪರಿಶೀಲನೆ

ರಾಮಕುಂಜ: ಕಡಬ ತಾಲೂಕು ರಾಮಕುಂಜ ಗ್ರಾಮದ ನೇಲಡ್ಕ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಗ್ರಾಮಸ್ಥರ ಮನವಿ ಮೇರೆಗೆ ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರೂ ಆದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೃಷ್ಣಪ್ಪ ಜಿ.ರಾಮಕುಂಜ ಅವರು ಆ.17ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಲಂಕಾರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ನೇಲಡ್ಕ ಎಂಬಲ್ಲಿ ಹಳೆಯ ಕಿರು ಸೇತುವೆಯಿದ್ದು ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಬಳಸುತ್ತಿದ್ದಾರೆ. ಆದರೆ ಸಮರ್ಪಕ ಸೇತುವೆ ಇಲ್ಲದೆ ಮಳೆಗಾಲದಲ್ಲಿ ಈ ಭಾಗದ ಜನರು ಪರದಾಟ ನಡೆಸುತ್ತಿದ್ದಾರೆ. ಮಳೆಗಾಲದಲ್ಲಿ ಸಂಪೂರ್ಣ ಸಂಪರ್ಕ ಕಳೆದುಕೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ರೈತರು, ಶಾಲೆಗೆ ಹೋಗುವ ಮಕ್ಕಳು, ವೃದ್ಧರು ಹೆಚ್ಚಾಗಿದ್ದು ಇಲ್ಲಿಗೆ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.

ಈ ಮನವಿ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಕೃಷ್ಣಪ್ಪ ಜಿ.ಅವರು ಇಲ್ಲಿ ಸೇತುವೆ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನದ ಅಗತ್ಯವಿದೆ. ಈ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿ ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಮಕುಂಜ ಗ್ರಾ.ಪಂ.ಮಾಜಿ ಸದಸ್ಯ ಯತೀಶ್ ಬಾನಡ್ಕ, ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಕರುಣಾಕರ ಗೌಡ ದೊಡ್ಡ ಉರ್ಕ ಹಾಗೂ ರಸ್ತೆ ಬಳಕೆದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here