







ಉಪ್ಪಿನಂಗಡಿ: ಮೈಸೂರಿನಲ್ಲಿ ಮುಕ್ತಾಯಗೊಂಡ `ದಸರಾ ಸಿಎಂ ಕಪ್-2026′ ರಾಜ್ಯ ಮಟ್ಟದ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಕಾಲೇಜಿನ ಟೀಕಮ್ಮ ಮಹಿಳೆಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಹಾಗೂ ಪುರುಷರ ವಿಭಾಗದಲ್ಲಿ ಕಾಲೇಜಿನ ಹೇಮಂತ್ ಹಾಗೂ ಹರಿಪ್ರಸಾದ್ ಇವರುಗಳು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.ಇವರುಗಳು ಈ ಬಾರಿಯ ಜಿಲ್ಲಾ ಮಟ್ಟದ ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು ಎಂದು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.












