ಪುತ್ತೂರು ವಸತಿಗೃಹದ ಸಿಬ್ಬಂದಿಯೊಬ್ಬರಿಗೆ ಹಲ್ಲೆ – ವಿಡಿಯೋ ವೈರಲ್

0

ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ವಸತಿಗೃಹವೊಂದರ ಸಿಬ್ಬಂದಿಯೊಬ್ಬರಿಗೆ ಅದೇ ಕಟ್ಟಡದಲ್ಲಿನ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಅ.17ರ ರಾತ್ರಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಎದುರು ಇರುವ ವಸತಿಗೃಹದ ಸಿಬ್ಬಂದಿ, ಕೊಯಿಲದ ರೀಫಾಯಿ ಎಂಬವರು ಹಲ್ಲೆಗೊಳಗಾದವರು. ಅವರಿಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ. ಮತ್ತಿಬ್ಬರು ಹಲ್ಲೆ ನಡೆಯುವುದನ್ನು ನೋಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ರಿಫಾಯಿ ಅವರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here