







ಪುತ್ತೂರು: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಶ್ರೀ ಕ್ಷೇತ್ರಕ್ಕೆ ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ರೈ ಪೆರುವಾಜೆಗುತ್ತು, ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪೆರುವಾಜೆ ಗ್ರಾ.ಪಂ, ಮಾಜಿ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ದ.ಕ.ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸಹಿತ ಹಲವರು ಉಪಸ್ಥಿತರಿದ್ದರು.












