







ಪ್ರತಿ ಮನೆಗಳಲ್ಲಿಯೂ ಧಾರ್ಮಿಕ ಶಿಕ್ಷಣ ನೀಡುವ ಕೆಲಸವಾಗಬೇಕು: ಸುಬ್ರಹ್ಮಣ್ಯ ನಟ್ಟೋಜ


ವಿಟ್ಲ: ನಾವು ಧರ್ಮವನ್ನು ರಕ್ಷಣೆ ಮಾಡಿದಲ್ಲಿ ಧರ್ಮ ನಮ್ಮನ್ನು ರಕ್ಷಿಸುತ್ತದೆ. ಸಮಾಜದಲ್ಲಿ ಧಾರ್ಮಿಕ ಶಿಕ್ಷಣದ ಕೊರತೆ ಹೆಚ್ಚಾಗಿ ಕಾಣುತ್ತಿದೆ. ಈ ನಿಟ್ಟಿನಲ್ಲಿ ಪ್ರತಿ ಮನೆಗಳಲ್ಲಿಯೂ ಧಾರ್ಮಿಕ ಶಿಕ್ಷಣ ನೀಡುವ ಕೆಲಸವಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜರವರು ಹೇಳಿದರು.



ಅವರು ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ 44ನೇ ವರ್ಷದ ನವರಾತ್ರಿ ಮತ್ತು ಶಾರದೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಧಿಗಳಾಗಿ ಆಗಮಿಸಿ ಮಾತನಾಡಿದರು.
ಭಜನಾಮಂಡಳಿಯ ಅಧ್ಯಕ್ಷರಾದ ಕೃಷ್ಣ ಕಿಶೋರ್ ಭಟ್ ಪೆಲತ್ತಿಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಜನಾಮಂಡಳಿಯ ಗೌರವ ಸಲಹೆಗಾರರಾದರಾಜಾರಾಮ ಶೆಟ್ಟಿ ಕೊಲ್ಪೆಗುತ್ತು. ಶ್ರೀಶಾರದಾಂಭ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಜಗದೀಶ್ ಪೂಜಾರಿ, ಶ್ರೀಶಾರದಾಂಭ ಮಹಿಳಾ ಸಮಿತಿಯ ಅಧ್ಯಕ್ಷರಾದ ಗೀತಾ ನಾಯ್ಕ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಭಜನಾಮಂಡಳಿಯ ಉಪಾಧ್ಯಕ್ಷರಾದ ಉದಯ ಕುಲಾಲ್ ಸ್ವಾಗತಿಸಿದರು. ಸದಸ್ಯರದ ಭಾಸ್ಕರ ಅಳಕೆಮಜಲು ವಂದಿಸಿದರು. ಸದಸ್ಯಾರಾದ ಸುಧೀರ್ ಕುಮಾರ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.










