







ಬೆಟ್ಟಂಪಾಡಿ :ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026–27ನೇ ಸಾಲಿನ ಮಾನವಿಕ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಪುರುಷೋತ್ತಮ ಭಟ್ ಸಂಘ ಉದ್ಘಾಟಿಸಿ, “ಸುಸ್ಥಿರತೆ: ಭವಿಷ್ಯದ ಸಮೃದ್ಧಿಯ ಕೀಲಿಕೈ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ವಹಿಸಿದ್ದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.
2025–26ನೇ ಸಾಲಿನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಪ್ರೊ. ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಗ್ರಂಥಪಾಲಕ ರಾಮ ಕೆ, ಇತಿಹಾಸ ಉಪನ್ಯಾಸಕ ಆದಿಲ್ ಎಂ. ಕೆ. ಹಾಗೂ ಮಾನವಿಕ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಯಶಸ್ವಿನಿ ಮತ್ತು ಪೂಜ್ಯ ಪ್ರಾರ್ಥಿಸಿದರು. ಕು.ಚಿರಸ್ವಿ ಅತಿಥಿಗಳನ್ನು ಪರಿಚಯಿಸಿದರು.ಲತಿಕಾ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಉದಯಶಂಕರ ಎಚ್. ಕಾರ್ಯಕ್ರಮ ನಿರೂಪಿಸಿದರು.










