







ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಯುಧ ಪೂಜಾ ಕಾರ್ಯಕ್ರಮವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಪೂಜಾ ಸಂಕಲ್ಪದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರಿಂದ ಲಲಿತಾಸಹಸ್ರನಾಮ ಪಾರಾಯಣ, ವಿದ್ಯಾರ್ಥಿಗಳಿಂದ ಭಜನೆ ಕಾರ್ಯಕ್ರಮ,ಕಾಲೇಜಿನ ಪ್ರಯೋಗಾಲಯಗಳ ಪೂಜೆ ಮತ್ತುವಾಹನಗಳ ಪೂಜಾಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.












