







ಸಂತ ಫಿಲೋಮಿನಾ ಕಾಲೇಜಿನ ಮಹಿಳಾ ಫುಟ್‌ಬಾಲ್ ತಂಡ ರನ್ನರ್‌ಅಪ್


ಪುತ್ತೂರು: ಮಂಗಳೂರಿನ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜನೆಯಲ್ಲಿ ಅ.16ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ಫುಟ್‌ಬಾಲ್ ಪಂದ್ಯಾವಳಿ 2026- 27ರಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರಿನ ಮಹಿಳಾ ಫುಟ್‌ಬಾಲ್ ತಂಡ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.
ತಂಡದ ಸಾಧನೆಯನ್ನು ಅಭಿನಂದಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ|ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ ಪಂದ್ಯಾವಳಿಯಲ್ಲಿ ಆಟಗಾರ್ತಿಯರು ತಮ್ಮ ಅತ್ಯುತ್ತಮ ಸಾಮರ್ಥ್ಯವನ್ನು ಪ್ರದರ್ಶಿಸಿ ನೀಡಿದ ಪ್ರಯತ್ನವನ್ನು ಶ್ಲಾಘಿಸಿ ಮುಂದಿನ ಪಂದ್ಯಾವಳಿಗಳಲ್ಲಿಯೂ ಇದೇ ರೀತಿಯ ಪ್ರಯತ್ನ ಮುಂದುವರಿಸುವಂತೆ ಹೇಳಿದ ಅವರು ತಂಡಕ್ಕೆ ಮಾರ್ಗದರ್ಶನ ಹಾಗೂ ಬೆಂಬಲ ನೀಡಿದ ದೈಹಿಕ ಶಿಕ್ಷಣ ನಿರ್ದೇಶಕಿ ಹರ್ಷಿತಾ ಶೆಟ್ಟಿರವರನ್ನು ಅಭಿನಂದಿಸಿದರು.













