ಕೊಕ್ಕಡ; ಅಂಗಡಿ ಬಾಡಿಗೆದಾರರಿಂದ ಸಾರ್ವಜನಿಕ ಶಾಂತಿಭಂಗ-ದೂರು

0

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನದ ಸಮೀಪವಿರುವ ಅಕ್ರಮ ಕಟ್ಟಡದಲ್ಲಿ ಅಂಗಡಿ ಬಾಡಿಗೆ ಪಡೆದುಕೊಂಡವರಿಂದಾಗಿ ಸಾರ್ವಜನಿಕ ಶಾಂತಿಭಂಗವುಂಟಾಗಿರುತ್ತದೆ ಎಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ನೀಡಿದ ದೂರರ್ಜಿಗೆ ಸಂಬಂಧಿಸಿ ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ನೀಡಿದೆ.


ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನದ ಸಮೀಪ ದೇವಸ್ಥಾನಕ್ಕಾಗಿ ಕಾಯ್ದಿರಿಸಲಾಗಿರುವ ಜಮೀನಿನಲ್ಲಿ ಈ ಹಿಂದೆ ಸದ್ರಿ ದೇವಸ್ಥಾನದ ಪದಾಧಿಕಾರಿಯಾಗಿದ್ದ ಕೊಕ್ಕಡ ನಿವಾಸಿ ಕೃಷ್ಣ ಭಟ್ ಎಂಬವರು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯದೇ, ಅಧಿಕೃತ ದಾಖಲೆಗಳಿಲ್ಲದೇ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿ ಬಾಡಿಗೆಗೆ ನೀಡಿದ್ದು, ಸದ್ರಿ ಕಟ್ಟಡದಲ್ಲಿ ಅಂಗಡಿಯನ್ನು ಬಾಡಿಗೆಗೆ ಪಡೆದುಕೊಂಡವರಿಂದಾಗಿ ಸಾರ್ವಜನಿಕ ಶಾಂತಿ ಭಂಗವುಂಟಾಗಿರುತ್ತದೆ ಎಂಬುದಾಗಿ ವ್ಯವಸ್ಥಾಪನಾ ಸಮಿತಿ ಹಾಲಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.19ರಂದು 354/2026 ರಂತೆ ದೂರರ್ಜಿ ದಾಖಲಾಗಿದ್ದು, ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here