ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂಗಾಂಗ ದಾನ ಜಾಗೃತಿ ಕಾರ್ಯಕ್ರಮ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಆರೋಗ್ಯ ಕೇಂದ್ರ, ಯುವ ರೆಡ್‌ಕ್ರಾಸ್ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಇದರ ಸಹಯೋಗದಲ್ಲಿ ಮಂಗಳೂರಿನ ಕುಂಟಿಕಾನದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಕಾರದೊಂದಿಗೆ ಕಾಲೇಜಿನ ಸ್ನಾತಕೋತ್ತರ ಸೆಮಿನಾರ್ ಸಭಾಂಗಣದಲ್ಲಿ ಅಂಗಾಂಗ ದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.


ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಾಮಾನ್ಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಲಹಾ ವೈದ್ಯರಾದ ಡಾ| ಸ್ವಾತಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗಾಂಗ ದಾನದ ಮಹತ್ವ, ಅಂಗಾಂಗ ದಾನದ ಮೂಲಕ ಜೀವಗಳನ್ನು ಉಳಿಸುವ ಸಾಧ್ಯತೆ ಹಾಗೂ ಅಂಗಾಂಗ ದಾನಿಗಳ ಅಗತ್ಯದ ಕುರಿತು ಮಾಹಿತಿ ನೀಡಿದರು.


ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಂಬಂಧಗಳು ಮತ್ತು ಸಂವಹನ ವಿಭಾಗದ ಕಾರ್ಯನಿರ್ವಾಹಕ ಕಾರ್ತಿಕ್ ಬಿ. ಸಹಕರಿಸಿದರು. ಮಾನಸಾ ಮತ್ತು ಸುಷ್ಮಾ ಪ್ರಾರ್ಥಿಸಿ, ದ್ವಿತೀಯ ಬಿ.ಬಿ.ಎ. ವಿದ್ಯಾರ್ಥಿ ಆದಿತ್ಯ ಕುದ್ವ ಸ್ವಾಗತಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಅಪೂರ್ವ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಬಿ.ಬಿ.ಎ. ವಿದ್ಯಾರ್ಥಿ ಅಬ್ದುಲ್ ಖಾದರ್ ವಂದಿಸಿದರು. ಕಾಲೇಜಿನ ಆರೋಗ್ಯ ಕೇಂದ್ರದ ಉಸ್ತುವಾರಿ ಶಶಿಪ್ರಭಾ ಬಿ. ಹಾಗೂ ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕಿ ಡಿಂಪಲ್ ಜೆನ್ನಿಫರ್ ಫೆರ್ನಾಂಡಿಸ್ ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here