







ಸಂಬಳ ಪಾವತಿಯಾಗುವವರೆಗೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲು ನಿರ್ಧಾರ


ಪುತ್ತೂರು: ಕಳೆದ ಮೂರು ತಿಂಗಳಿಂದ ಸಂಬಳ ಪಾವತಿಯಾಗದಿರುವುದನ್ನು ಖಂಡಿಸಿ, ಸಂಬಳ ದೊರೆಯುವವರೆಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲು ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.














