ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನ

0

ನಿಡ್ಪಳ್ಳಿ; ಇಲ್ಲಿಯ ಶ್ರೀ ಶಾಂತದುರ್ಗಾ ದೇವಾಲಯದಲ್ಲಿ ನವರಾತ್ರಿ ಉತ್ಸವ ಅ.11 ರಿಂದ 21 ರವರೆಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದು ಅದ್ದೂರಿಯಾಗಿ ಸಂಪನ್ನ ಗೊಂಡಿತು.

ಅ.11 ರಂದು ಮಹಾಗಣಪತಿ ಹವನ ನಂತರ ದೇವರಿಗೆ ಪಂಚವಿಂಶತಿ ಕಲಶ ನಡೆದು ಯಶಸ್ವಿ ಇಂಜಿನಿಯರ್ಸ್ ಬೈಕಂಪಾಡಿ ಇದರ ಆಡಳಿತ ಪಾಲುದಾರ ದಿನೇಶ್ ಕುಮಾರ್ ಪಳಂಬೆ ಇವರು ದೀಪ ಬೆಳಗಿಸಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ  ವಿಶೇಷ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಅ.16 ರಂದು ಬೆಳಿಗ್ಗೆ  ಸಾಮೂಹಿಕ ಚಂಡಿಕಾ ಹೋಮ ನಡೆದು ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.ಅ.18 ರಂದು  ಹಿಂದೂ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.ಅ.20 ರಂದು ವಿಶೇಷ ಆಯುಧ ಪೂಜೆ ನಡೆದು ಸಂಜೆ  ಸಾಮೂಹಿಕ ದುರ್ಗಾಪೂಜೆ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಅ.21 ರಂದು ಕದಿರು ತುಂಬಿಸುವುದು, ಅಕ್ಷರಾಭ್ಯಾಸ, ಮಧ್ಯಾಹ್ನ ವಿಜಯದಶಮಿ ಪ್ರಯುಕ್ತ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಪ್ರತಿದಿನ ರಾತ್ರಿ  ವಿಶೇಷ ಅಲಂಕಾರ ಪೂಜೆ,  ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನಾ ಸಂಘಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.  ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಿತು.

ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಪ್ರಮೋದ್ ಆರಿಗ ನಿಡ್ಪಳ್ಳಿ ಗುತ್ತು, ಕಿನ್ನಿಮಾಣಿ ಪೂಮಾಣಿ ಪರಿವಾರ ದೈವಗಳ ದೈವಸ್ಥಾನ ಇದರ ಅನುವಂಶಿಕ ಆಡಳಿತ ಮೊಕ್ತೇಸರರಾದ ಪ್ರವೀಣ್ ಎನ್. ಆರಿಗ ನಿಡ್ಪಳ್ಳಿ ಗುತ್ತು, ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ, ಕಾರ್ಯದರ್ಶಿ ಮಂಜುನಾಥ ರೈ ಹಾಗೂ ಸರ್ವ ಸದಸ್ಯರು, ಊರ ಪರವೂರ ಸಾವಿರಾರು ಭಕ್ತಾದಿಗಳು ಪಾಲ್ಗೊಂಡರು.

ಸಾಂಸ್ಕೃತಿಕ ಕಾರ್ಯಕ್ರಮಗಳು:
ಅ.13 ರಂದು ರಾತ್ರಿ  ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ಪ್ರಸಂಗ ಶಾಂಭವಿ ವಿಜಯ ನಡೆಯಿತು. ಅ.16 ರಂದು ರಾತ್ರಿ  ಪ್ರಿಯದರ್ಶಿನಿ ಅಂಗ್ಲ ಮಾಧ್ಯಮ ಶಾಲೆ ಬೆಟ್ಟಂಪಾಡಿ ಇಲ್ಲಿನ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here