ಅ.27ರವರೆಗೆ ರಾಜ್ಯದಲ್ಲಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.27ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅ.25ರ ಭಾನುವಾರ:
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆ, ಉತ್ತರ ಕನ್ನಡದಲ್ಲಿ ಲಘು ಮಳೆ ಸಾಧ್ಯತೆ. ಧಾರವಾಡ, ಗದಗ, ಹಾವೇರಿಯಲ್ಲಿ ಅಲ್ಲಲ್ಲಿ ತುಂತುರು ಮಳೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ. ಕೋಲಾರ, ಚಾಮರಾಜನಗರದಲ್ಲಿ ಒಂದೆರಡು ಕಡೆ ಭಾರಿ ಮಳೆ ಸಾಧ್ಯತೆ. ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಹಿತ ಸಾಧಾರಣ ಮಳೆ. ದಾವಣಗೆರೆ, ಬಳ್ಳಾರಿ, ವಿಜಯನಗರ, ಚಿತ್ರದುರ್ಗದಲ್ಲಿ ಒಣ ಹವೆ.

ಅ.24ರ ಶನಿವಾರದ ವರದಿ:
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆ, ಉತ್ತರ ಕನ್ನಡದಲ್ಲಿ ಲಘು ಮಳೆ. ಧಾರವಾಡ, ಗದಗ, ಹಾವೇರಿಯಲ್ಲಿ ಹಗುರ ಮಳೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ. ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ. ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆ.

ಅ.26ರ ಸೋಮವಾರ:
ದಕ್ಷಿಣ ಕನ್ನಡದಲ್ಲಿ ಒಂದೆರಡು ಕಡೆ ಲಘು ಮಳೆ, ಉಡುಪಿ, ಉತ್ತರ ಕನ್ನಡದಲ್ಲಿ ಒಣ ಹವೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಭಾಗ, ಕೋಲಾರದಲ್ಲಿ ಹಗುರದಿಂದ ಸಾಧಾರಣ ಮಳೆ. ಹಾಸನ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣ ಹವೆ.

ಅ.27ರ ಮಂಗಳವಾರ:
ದಕ್ಷಿಣ ಕನ್ನಡದಲ್ಲಿ ಒಂದೆರಡು ಕಡೆ ಲಘು ಮಳೆ, ಉಡುಪಿ, ಉತ್ತರ ಕನ್ನಡದಲ್ಲಿ ಒಣ ಹವೆ. ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ. ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಭಾಗ, ಕೋಲಾರ, ಕೊಡಗಿನಲ್ಲಿ ಹಗುರದಿಂದ ಸಾಧಾರಣ ಮಳೆ. ಉಳಿದಂತೆ ಮಲೆನಾಡು ಮತ್ತು ಮಧ್ಯ ಕರ್ನಾಟಕದಲ್ಲಿ ಒಣ ಹವೆ ಹೆಚ್ಚಾಗಲಿದೆ.

LEAVE A REPLY

Please enter your comment!
Please enter your name here