







ನೆಲ್ಯಾಡಿ: ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ಅ.24ರಂದು ಬೆಳಗ್ಗೆ ನಡೆದಿದೆ.


ಬಿ.ಸಿ.ರೋಡ್‌ನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿ ನಡುವೆ ಬರ್ಚಿನಹಳ್ಳದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಅನೂಪ್ ಕುಮಾರ್, ಅವರ ಪತ್ನಿ ವೀಣಾ ಹಾಗೂ ಅತ್ತೆ ರೇಖಾ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ. ಗಾಯಾಳುಗಳು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾರಿ ಚಾಲಕ ಎದುರಿನಿಂದ ಹೋಗುತ್ತಿದ್ದ ಲಾರಿಯನ್ನು ಓವರ್‌ಟೇಕ್ ಮಾಡಲು ಹೋಗಿ ಕಾರಿಗೆ ಡಿಕ್ಕಿಯಾಗಿರುವುದಾಗಿ ವರದಿಯಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













