ಶಾಂತಿನಗರ ಪ್ರೌಢಶಾಲಾ ವಿದ್ಯಾರ್ಥಿ ರೋಶನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ರೋಶನ್ ಡಿ ಸೋಜಾ ಚಕ್ರ ಎಸೆತ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅ.24ರಂದು ಸಂತಫಿಲೋಮಿನಾ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ದ.ಕ.ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತಫಿಲೋಮಿನಾ ಅನುದಾನಿತ ಪ್ರೌಢಶಾಲೆ ದರ್ಬೆ ಇದರ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ 17ರ ವಯೋಮಾನದ ಬಾಲಕರ ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ ರೋಶನ್ ಡಿಸೋಜಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ನಿರ್ಮಲ ರೋಡ್ರಿಗಸ್ ತರಬೇತಿ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here