







ಡಾ. ವಿದ್ಯಾಭೂಷಣ ಅವರಿಂದ ವಿವೇಕ ಗಾನಾಮೃತ – ಸಾರ್ವಜನಿಕರಿಗಾಗಿ ಸಂಗೀತ ಕಾರ್ಯಕ್ರಮ
ವಿವೇಕಾನಂದ ಪದವಿಪೂರ್ವ ಕಾಲೇಜಿನ 60 ನೇ ವರ್ಷಾಚರಣೆಯಪ್ರಯುಕ್ತ ವಿಶೇಷ ಕಾರ್ಯಕ್ರಮ


ಪುತ್ತೂರು: ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಪುತ್ತೂರು ಹಾಗೂ ಆಸುಪಾಸಿನ ಸಾರ್ವಜನಿಕ ಶಿಕ್ಷಣಾಭಿಮಾನಿಗಳ ಸಹಕಾರದಿಂದ 60 ವರ್ಷಗಳ ಪಯಣವನ್ನು ಪೂರೈಸಿದೆ. ಪ್ರಾರಂಭದಲ್ಲಿ ಪುತ್ತೂರು ಎಜುಕೇಷನ್ ಸೊಸೈಟಿ ಎಂಬ ಹೆಸರಿನಿಂದ ಪ್ರಾರಂಭಗೊಂಡು ಮುಂದೆ ವಿವೇಕಾನಂದ ವಿದ್ಯಾವರ್ಧಕ ಸಂಘ ಎಂದು ಮರುನಾಮಕರಣಗೊಂಡ ಸಂಘದಡಿಯಲ್ಲಿ ಇಂದು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ವಿವಿಧ ಸಂಸ್ಥೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು 60 ವರ್ಷಗಳ ಸಾರ್ಥಕ ಶಿಕ್ಷಣ ಪಯಣವನ್ನು ಪುತ್ತೂರಿನಲ್ಲಿ ಪೂರೈಸಿರುವ ಸಂದರ್ಭದಲ್ಲಿ ಸಂಸ್ಥೆಯು ಅ.27ರಂದು ಸಂಜೆ ಗಂಟೆ 6 ರಿಂದ ಸಾರ್ವಜನಿಕರಿಗಾಗಿ ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,”ವಿವೇಕ ಗಾನಾಮೃತ” ಎಂಬ ಶೀರ್ಷಿಕೆಯಡಿಯಲ್ಲಿ ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.




ನಾಡಿನ ಖ್ಯಾತ ಸಂಕೀರ್ತನಕಾರರಾದ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ‘ಸಂಗೀತ ವಿದ್ಯಾನಿಧಿ’ ಡಾ. ವಿದ್ಯಾಭೂಷಣ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಕರ್ನಾಟಕ ವಿಧಾನ ಪರಿಷತ್ನ ಮಾಜಿ ಸದಸ್ಯ ಕಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.










