ಸುಬ್ಬಣ್ಣ ಪಂಡಿತರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ

0

ಉಪ್ಪಿನಂಗಡಿ: ದೈವನರ್ತನ ಕಲಾವಿದ, ನಾಟಿವೈದ್ಯ ಬಜತ್ತೂರು ಗ್ರಾಮದ ಕಾಂಚನ ಕುಡ್ತಡ್ಕ ಸುಬ್ಬಣ್ಣ ಪಂಡಿತ ಅವರಿಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೦೨೬ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪುರಸ್ಕೃತರ ಪರಿಚಯ ಒಳಗೊಂಡ ’ನೆಲದ ನಾದ’ ಕೈಪಿಡಿಯನ್ನು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ವಸುಂಧರಾ, ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ವಿಶ್ವನಾಥ್, ಜಾನಪದ ಅಕಾಡೆಮಿಯ ಸದಸ್ಯ ಮಲ್ಲಿಕಾರ್ಜುನ ಕಲಮರಹಳ್ಳಿ, ಸಂಚಾಲಕರಾದ ಸಿ.ಎನ್. ಮಂಜೇಶ್ ಚೆನ್ನಾಪುರ, ಕೆಂಪಮ್ಮ, ರಿಜಿಸ್ಟ್ರಾರ್ ಶ್ರುತಿ ಎಂ., ವ.ನಂ.ಶಿವರಾಮ್, ಅಕಾಡೆಮಿ ಸದಸ್ಯರು, ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿ ವಿಜೇತರು, ಜಾನಪದ ಕಲಾವಿದರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here