







ನಿಡ್ಪಳ್ಳಿ; ಸಾರ್ವಜನಿಕ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ಫಿಲೋಮಿನಾ ಪ್ರೌಢಶಾಲೆ ದರ್ಬೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದ ಚಕ್ರ ಎಸೆತ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿಯ 8ನೇ ತರಗತಿ ವಿದ್ಯಾರ್ಥಿ ದೀಕ್ಷಿತ್ ಕುಮಾರ್ ಬಿ ಪ್ರಥಮ ಸ್ಥಾನ ಪಡೆದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜರಗುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾನೆ ಎಂದು ಮುಖ್ಯ ಗುರುಗಳಾದ ವಿಜಯಕುಮಾರ್ ಎಂ ತಿಳಿಸಿರುತ್ತಾರೆ .ಈತ ನಿಡ್ಪಳ್ಳಿಗ್ರಾಮದ ಬೇರಿಕೆ ನಿವಾಸಿ ವಾಮನ ನಾಯ್ಕ ಮತ್ತು ಗೀತಾ ದಂಪತಿಗಳ ಪುತ್ರನಾಗಿದ್ದಾನೆ.












