







ವಿಟ್ಲ: ಮಹಿಳೆಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ರಕೆರೆ ಎಂಬಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ವಿಟ್ಲ ಕಸಬ ನೆತ್ರಕೆರೆ ನಿವಾಸಿ ಯಮುನ (55 ವ.) ಆತ್ಮಹತ್ಯೆ ಮಾಡಿಕೊಂಡವರು.



ಕೆಲ ವರ್ಷಗಳ ಹಿಂದೆ ಯಮುನ ಅವರ ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಜೀವನದಲ್ಲಿ ಜಿಗುಪ್ಸೆಗೊಂಡು ಯಮುನಾ ರವರು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿರುವ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.










