ಆಲಂಕಾರು: ಪೋಸ್ಟ್‌ಮ್ಯಾನ್ ಸದಾನಂದ ಎಂ.ಗೆ ಜೇಸಿಐ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ

0

ಆಲಂಕಾರು: ಆಲಂಕಾರು ಅಂಚೆ ಕಚೇರಿಯ ಪೋಸ್ಟ್‌ಮ್ಯಾನ್ ಸದಾನಂದ ಎಂ. ಅವರಿಗೆ ಜೇಸಿಐ ಆಲಂಕಾರು ಘಟಕದಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರ ನೀಡಿ ಗೌರವಿಸಲಾಯಿತು.

ಆಲಂಕಾರಿನ ಶ್ರೀ ದುರ್ಗಾಂಬಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಕ್ಟೋಬರ್ ತಿಂಗಳ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಯಿತು. ಜೇಸಿಐ ಆಲಂಕಾರು ಘಟಕದ ಅಧ್ಯಕ್ಷ ಜೇಸಿ ಮಹೇಶ್ ಪಾಟಾಳಿ ಅಧ್ಯಕ್ಷತೆ ವಹಿಸಿದ್ದರು. ಘಟಕದ ಸ್ಥಾಪಕ ಜೇಸಿ ಪ್ರಶಾಂತ್ ಕುಮಾರ್ ರೈ, ದುರ್ಗಾಂಬಾ ಕಾಲೇಜಿನ ಆಡಳಿತಾಧಿಕಾರಿ ಶ್ರೀಪತಿ ರಾವ್ ಹೆಚ್, ನಿಕಟಪೂರ್ವ ಅಧ್ಯಕ್ಷ ಜೇಸಿ ಗುರುರಾಜ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಳೆದ 21 ವರ್ಷಗಳಿಂದ ಆಲಂಕಾರು ಅಂಚೆ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸದಾನಂದ ಎಂ. ಅವರು ಪ್ರತಿದಿನ ಸಕಾಲದಲ್ಲಿ ಮನೆ-ಮನೆಗೆ ಅಂಚೆ ತಲುಪಿಸುವುದರ ಜೊತೆಗೆ ಸರ್ಕಾರದ ವಿವಿಧ ಸೌಲಭ್ಯಗಳು, ಪಿಂಚಣಿ ಹಾಗೂ ಪ್ರಮುಖ ದಾಖಲೆಗಳನ್ನು ಗ್ರಾಹಕರಿಗೆ ಸುರಕ್ಷಿತವಾಗಿ ತಲುಪಿಸುತ್ತಿದ್ದಾರೆ. ಅವರ ಪ್ರಾಮಾಣಿಕ ಸೇವೆ ಮತ್ತು ಸಾಮಾಜಿಕ ಕಳಕಳಿಯನ್ನು ಗುರುತಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮಹಿಳಾ ಜೇಸಿ ಸಂಯೋಜಕಿ ಕೃತಿಕಾ ಟಿ.ರೈ, ದುರ್ಗಾಂಬಾ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಶ್ರೇಯಸ್ ರೈ, ಘಟಕದ ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here