







ಪುತ್ತೂರು: ಇರ್ದೆ ಪಳ್ಳಿತಡ್ಕ ಮಖಾಂ ಊರೂಸ್ ಸಮಾರಂಭದ ದಿನಾಂಕ ಪ್ರಕಟಗೊಂಡಿದ್ದು 2027ನೇ ಎ.4ರಿಂದ ಎ.10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಕೊರಿಂಗಿಲ ಜಮಾಅತ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಕುಂಞಿ ಹಾಜಿ ಕೊರಿಂಗಿಲ ಅವರ ಅಧ್ಯಕ್ಷತೆಯಲ್ಲಿ ಕೊರಿಂಗಿಲ ಮಸೀದಿಯಲ್ಲಿ ನಡೆದ ಜಮಾಅತ್ ಕಮಿಟಿ ಸಭೆಯಲ್ಲಿ 51ನೇ ಊರೂಸ್ ಕಾರ್ಯಕ್ರಮದ ದಿನಾಂಕವನ್ನು ಪ್ರಕಟಿಸಲಾಯಿತು.



ಕೊರಿಂಗಿಲ ಜಮಾಅತ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಕುಂಞಿ ಹಾಜಿ ಕೊರಿಂಗಿಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ 7 ದಿವಸಗಳ ಉರೂಸ್ ಕಾರ್ಯಕ್ರಮವನ್ನು ಸಯ್ಯದ್ ಅಲೀ ತಂಙಳ್ ಕುಂಬೋಳ್ ಉದ್ಘಾಟಿಸಲಿದ್ದು ಸಯ್ಯದ್ ಹಾಶಿಮ್ ಬಾಅಲವಿ ತಂಙಳ್ ಕೊರಿಂಗಿಲ ದುವಾ ನೆರವೇರಿಸಲಿದ್ದಾರೆ. ಸಮಾರೋಪ ಸಮಾರಂಭವು ಸಯ್ಯದ್ ಆಟಕೋಯ ತಂಙಳ್ ಕುಂಬೋಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊರಿಂಗಿಲ ಜಮಾಅತ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.










