ಕಾವು: ತುಡರ್ ಭಜನಾ ಸಂಘದ 11ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಕಾವು: ಭಾರತ ಸರ್ಕಾರದ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ಅಧೀನದಲ್ಲಿರುವ ತುಡರ್ ಭಜನಾ ಸಂಘದ 11ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರ ವನ್ನು ಅ.26ರಂದು ಸಂಜೆ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.


ದೇವಸ್ಥಾನದ ಅರ್ಚಕ ವಿಕಾಸ್ ಕಡಮಣ್ಣಾಯರವರು ಕಾರ್ಯಕ್ರಮದ ಯಶಸ್ವಿಗೆ ಶ್ರೀದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ತುಡರ್ ಯುವಕ ಮಂಡಲದ ಗೌರವಾಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ, ಅಧ್ಯಕ್ಷ ಶ್ರೀಕುಮಾರ್ ಬಲ್ಯಾಯ, ಪ್ರಧಾನ ಕಾರ್ಯದರ್ಶಿ ಹರ್ಷಿತ್ ಎ.ಆರ್, ಜತೆ ಕಾರ್ಯದರ್ಶಿ ರತೀಶ್ ಪಾಟಾಳಿ, ಭಜನಾ ಸಂಘದ ಅಧ್ಯಕ್ಷ ಲಿಂಗಪ್ಪ ನಾಯ್ಕ ನನ್ಯ, ಕಾರ್ಯದರ್ಶಿ ಜಗದೀಶ ನಾಯ್ಕ ಆಚಾರಿಮೂಲೆ, ಯುವಕ ಮಂಡಲದ ಮಾಜಿ ಅಧ್ಯಕ್ಷ ಸುನೀಲ್ ನಿಧಿಮುಂಡ, ಸದಸ್ಯರಾದ ಸಂಕಪ್ಪ ಪೂಜಾರಿ ಚಾಕೋಟೆ, ನಿರಂಜನ ರಾವ್ ಕಮಲಡ್ಕ, ಅಮೃತ್ ಕಾವು, ಸಾತ್ವಿಕ್ ಮದ್ಲ, ರಶ್ಮಿತ್ ಆಚಾರಿಮೂಲೆಯವರು ಉಪಸ್ಥಿತರಿದ್ದರು.

ನ.8ರಂದು ಕಾರ್ಯಕ್ರಮ
ತುಡರ್ ಭಜನಾ ಸಂಘದ 11ನೇ ವಾರ್ಷಿಕೋತ್ಸವ ಸಮಾರಂಭವು ನ.8ರಂದು ಸಂಜೆ ನನ್ಯ ಜನಮಂಗಲ ಸಭಾಭವನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಸಂಜೆ ಭಜನಾ ಸಂಕೀರ್ತನೆ, ರಾತ್ರಿ ಧಾರ್ಮಿಕ ಸಭೆ-ಸನ್ಮಾನ, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here