







ಬೆಟ್ಟಂಪಾಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಅ.26ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಸುಬ್ರಹ್ಮಣ್ಯ ಭಟ್ ಅವರು ವಾಲ್ಮೀಕಿಯವರ ಜೀವನ, ಸಾಹಿತ್ಯಿಕ ಕೊಡುಗೆ ಹಾಗೂ ವಾಲ್ಮೀಕಿ ಜಯಂತಿಯ ಮಹತ್ವದ ಕುರಿತು ಮಾತನಾಡಿದರು. ರಾಮಾಯಣ ಮಹಾಕಾವ್ಯದ ಮೂಲಕ ಭಾರತೀಯ ಸಾಹಿತ್ಯ ಮತ್ತು ಸಂಸ್ಕೃತಿಗೆ ಅಮೂಲ್ಯ ಕೊಡುಗೆ ನೀಡಿದ ಮಹರ್ಷಿ ವಾಲ್ಮೀಕಿಯವರು ಮಾನವೀಯ ಮೌಲ್ಯಗಳು, ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದು ತಿಳಿಸಿದರು. ಇಂತಹ ಜಯಂತಿ ಆಚರಣೆಗಳು ಮಹಾನ್ ವ್ಯಕ್ತಿಗಳ ಜೀವನ ಸಂದೇಶವನ್ನು ಯುವಜನತೆಗೆ ಪರಿಚಯಿಸುವುದರ ಜೊತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಗೌರವ ಮತ್ತು ಅರಿವನ್ನು ಮೂಡಿಸುತ್ತವೆ ಎಂದು ಹೇಳಿದರು.



ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಾನ್ ವ್ಯಕ್ತಿಗಳ ಆದರ್ಶಗಳು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸನ್ಮಾರ್ಗದಲ್ಲಿ ನಡೆಯಲು ಪ್ರೇರಣೆಯಾಗಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.










