ನಾಳೆ (ಅ.28) : ಮಂಗಳೂರಿನಲ್ಲಿ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ 35ನೇ ವಾರ್ಷಿಕ ಮಹಾಸಭೆ

0

ಪುತ್ತೂರು: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.), ಮಂಗಳೂರು (ಬ್ಯಾಂಕ್ ಆಫ್ ಬರೋಡ ಸಂಯೋಜಿತ) ಇದರ 35ನೇ ವಾರ್ಷಿಕ ಮಹಾಸಭೆಯು ಅ. 28 ರಂದು ಬೆಳಿಗ್ಗೆ 11.00 ಗಂಟೆಗೆ ಮಂಗಳೂರಿನ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.

ಸಭೆಯ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷರು ವಹಿಸಲಿದ್ದು, ಸಭೆಯಲ್ಲಿ 2025–26ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳ ವರದಿಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು. ಅಲ್ಲದೆ, 2025–26ನೇ ಸಾಲಿನ ಲೆಕ್ಕಪರಿಶೋಧಕರ ವರದಿ ಹಾಗೂ ಮಂಜೂರಾತಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಪ್ರತಿಷ್ಠಾನದ ಕಾರ್ಯಚಟುವಟಿಕೆಗಳು, ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಪ್ರತಿಷ್ಠಾನದ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯದರ್ಶಿ ಬಿ. ರಾಜೇಂದ್ರ ರೈ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here