ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಗಾನಾಮೃತ – ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರ ಡಾ. ವಿದ್ಯಾಭೂಷಣ ಅವರಿಗೆ ಕಾಲೇಜಿನ ವತಿಯಿಂದ ಸನ್ಮಾನ

0

ಪುತ್ತೂರು :ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ವಿಶೇಷ ಸಂಗೀತ ಕಾರ್ಯಕ್ರಮ ’ವಿವೇಕ ಗಾನಮೃತ’ ಕಾರ್ಯಕ್ರಮ ಏಕತಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರರಾದ ಸಂಗೀತ ವಿದ್ಯಾನಿಧಿ ಡಾ. ವಿದ್ಯಾಭೂಷಣ ಅವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ, ವಿವೇಕಾನಂದ ಮಹಾ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಶ್ರೀಪತಿ ಕಲ್ಲೂರಾಯ, ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕಿ ಪುಷ್ಪಲತಾ ನಿರೂಪಿಸಿದರು.

LEAVE A REPLY

Please enter your comment!
Please enter your name here