






ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಮೃತಪಟ್ಟ ಘಟನೆ ಅ.25ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವೀರಮಂಗಲ ಸುಂದರ ಎಂಬವರ ಪತ್ನಿ ಮಮತ(32ವ)ರವರು ಮೃತಪಟ್ಟವರು. ಅವರು ಅ.24ರಂದು ಮನೆಯಲ್ಲಿ ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಅ.25ರಂದು ಮೃತಪಟ್ಟಿದ್ದರು.ಆರಂಭದಲ್ಲಿ ಮಹಿಳೆಯ ಹೇಳಿಕೆ ಪಡೆದುಕೊಂಡಿದ್ದ ಪೊಲೀಸರು, ಆಕೆಯ ಗಂಡನ ಸಹೋದರ ಉಮೇಶ್ ಮತ್ತು ಆತನ ಪತ್ನಿ ವಸಂತಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.













