ಗೇರುಕಟ್ಟೆ : ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿರುವ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ ಸಾರ್ವಜನಿಕರಿಗೆ ಕ್ರೀಡಾ ಕೂಟವನ್ನು ಸೆ.17 ರಂದು ನೆರವೇರಿಸಲಾಯಿತು. ಈ ಕಾರ್ಯಕ್ರಮವನ್ನು ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಜನಾರ್ದನ ಗೌಡ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.
ಗೇರುಕಟ್ಟೆ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ಪುರುಷರಿಗೆ ಕಬಡ್ಡಿ ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ ಜರುಗಿತು. ಪುರುಷರು, ಮಹಿಳೆಯರು ಹಾಗೂ ಸಾರ್ವಜನಿಕರು ಕ್ರೀಡಾ ಕೂಟದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು,ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಸಿಬ್ಬಂದಿಗಳು, ಸ್ಥಳೀಯ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಕ್ರೀಡಾ ಕೂಟಕ್ಕೆ ಸಹಕರಿಸಿದರು. ಕಳಿಯ ಗ್ರಾ.ಪಂ ಸದಸ್ಯ ಅಬ್ದುಲ್ ಕರೀ. ಕೆ.ಎಂ ಕಾರ್ಯಕ್ರಮ ನಿರೂಪಿಸಿದರು.