ಇಳಂತಿಲ :ಇಳಂತಿಲ ಗ್ರಾಮ ಪಂಚಾಯತು 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಅ.20 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಿಕಾ ಭಟ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜು ನಾಯ್ಕ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಉಪಾಧ್ಯಕ್ಷ ಸುಪ್ರೀತ್ ಪಿ.ಪಂಚಾಯತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪಂ.ಅಭಿವೃದ್ಧಿ ಅಧಿಕಾರಿ ಗೀತಾ ಆರ್. ಸಾಲಿಯಾನ್, ಕಾರ್ಯದರ್ಶಿ ಶೀಲಾ ಎಸ್. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಸಿಬ್ಬಂದಿಗಳು ಸಹಕರಿಸಿದರು.