ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ವಿಧಾನಸಭಾ ಚುನಾವಣೆಯ ಭಾಗವಾಗಿ ಪೂರ್ವಭಾವಿ ಕಾರ್ಯಕರ್ತರ ಸಭೆ ಬೆಳ್ತಂಗಡಿ ಅಂಬೇಡ್ಕರ್ ಸಭಾಭವನದಲ್ಲಿ ನ.4ರಂದು ಜರುಗಿತು.
ಈ ಸಭೆಯಲ್ಲಿ ಮುಂಬರುವ ಬೆಳ್ತಂಗಡಿ ವಿಧಾನಸಭಾ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನಿಸಾರ್ ಕುದ್ರಡ್ಕ ರವರು ವಹಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ತುಂಬೆ , ಪಕ್ಷದ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಎಸ್ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯ ನವಾಝ್ ಶರೀಫ್ ಕಟ್ಟೆ ಉಪಸ್ಥಿತರಿದ್ದರು.
ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ ಧನ್ಯವಾದ ಸಮರ್ಪಿಸಿದರು.
ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ನಾಯಕರಾದ ಹನೀಫ್ ಪೂಂಜಾಲಕಟ್ಟೆ , ಇನಾಸ್ ರೋಡ್ರಿಗಸ್, ಅಬ್ದುಲ್ ಅಝೀಝ್ ಝುಹರಿ, ಅಶ್ರಫ್ ಕಟ್ಟೆ, ಫಝಲ್ ರಹಮಾನ್, ಸಾದಿಕ್ ಲಾಯಿಲ, ಕ್ಷೇತ್ರ ವ್ಯಾಪ್ತಿಯ ಪಕ್ಷದ ಚುನಾಯಿತ ಪಂಚಾಯತ್ ಸದಸ್ಯರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.